ಕೂಡಲಸಂಗಮ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಎಸ್‌ಡಿಎಂಸಿ ಅಧ್ಯಕ್ಷ ಮುತ್ತಣ್ಣ ಕುರಿ ಉದ್ಘಾಟಿಸಿದರು. ಎಚ್.ಎ.ವಕ್ರ, ವಿನೋದ ಕುಮಾರ ಭೋವಿ, ಮುರಳೀಧರ ದೇಶಪಾಂಡೆ, ಎಸ್.ಬಿ. ಈಟಿ ಮತ್ತಿತರರಿದ್ದಾರೆ. 
ಜಿಲ್ಲೆ

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ

ವಿನಯ ಆಶೋಕ ನಾಯ್ಕ

ಕೂಡಲಸಂಗಮ: ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಅರ್ಹತೆ, ಅಪಾರ ಜ್ಞಾನ ಹೊಂದಿದ ಶಿಕ್ಷಕರಿದ್ದು, ಅವರ ಸದುಪಯೋಗವನ್ನು ಮಕ್ಕಳು ಪಡೆಯಬೇಕು ಎಂದು ತಾಲೂಕು ಸಮೂಹ ಸಂಪನ್ಮೂಲ ವ್ಯಕ್ತಿ ವಿನೋದಕುಮಾರ ಭೋವಿ ಹೇಳಿದರು.

ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪಾಲಕರು ಸರ್ಕಾರಿ ಶಾಲೆಯ ಬಗ್ಗೆ ಸಕಾರಾತ್ಮ ಆಲೋಚನೆ ಬೆಳೆಸಿಕೊಳ್ಳಬೇಕು. ಖಾಸಗಿ ಶಾಲೆ ಮೀರಿಸುವಷ್ಟು ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಿವೆ ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಚ್.ಎ. ವಕ್ರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಅಧಿಕ ಸೌಲಭ್ಯಗಳು ಇದ್ದು, ಮಕ್ಕಳು ಸಮಪರ್ಕವಾಗಿ ಬಳಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.

ತಾಲೂಕಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಮಾತನಾಡಿ, ಕೂಡಲಸಂಗಮ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ ಮಾಡಿದೆ. ಈ ಶಾಲೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ತಾಲೂಕು ಪಂಚಾಯಿತಿಯಿಂದ ನೀಡಲಾಗುವುದು. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳು ಈ ಶಾಲೆಯಲ್ಲಿ ಇವೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದರು.

ಸರ್ಕಾರಿ ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮುತ್ತಣ್ಣ ಕುರಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಎಸ್.ಬಿ. ಈಟಿ ಅಧ್ಯಕ್ಷತೆ ವಹಿಸಿದ್ದರು. ಜಿ.ವೈ. ಆಲೂರ, ಸಂಗಮೇಶ ಹೊಲ್ದೂರ, ಡಿ.ಬಿ. ನದಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗವ್ವ ರಾಂಪೂರ, ಅಜೀಂ ಪ್ರೇಮಜಿ ೌಂಡೇಶನ್ ಜಿಲ್ಲಾ ಮುಖ್ಯಸ್ಥ ನಾಗರಾಜ ಮತ್ತಿತರರಿದ್ದರು. ಆರ್.ಎ. ತಂಬಾಕ ಸ್ವಾಗತಿಸಿದರು, ಎಸ್.ಎಲ್.ಪಾಟೀಲ ನಿರೂಪಿಸಿ, ವಂದಿಸಿದರು.