ಜಿಲ್ಲೆ

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ

ಪ್ರಸಿನ್ ಕೆ.ಆರ್

ಅರಸೀಕೆರೆ ಗ್ರಾಮಾಂತರ: ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಶಾಲೆಗಿಂತ ಮಿಗಿಲಾಗಿ ವಸತಿ ಶಾಲೆಗಳು ಕೂಡ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.

ತಾಲೂಕಿನ ಬಾಣಾವರ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳು ವಿದ್ಯಾಭ್ಯಾಸದ ಜತೆ ಆಟೋಟ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ.

ಮಕ್ಕಳ ಭೌತಿಕ ಬೆಳವಣಿಗೆಗೆ ಹಾಗೂ ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಇಲ್ಲೂ ಕೂಡ ಇಂಗ್ಲೀಷ್ ಶಿಕ್ಷಣ ನೀಡುವಂತಾಗಬೇಕು. ಸರ್ಕಾರದ ಸವಲತ್ತುಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದರು.

ಕಾಚಿಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಸೋಮಣ್ಣ, ಸದಸ್ಯ ಬಸವರಾಜ್, ಶಿವಶಂಕರ್, ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶಿವಮೂರ್ತಿ, ರವಿಚಂದ್ರ, ಸಿ.ಎನ್. ಉಷಾ, ಪ್ರಾಂಶುಪಾಲ ಜೈಪ್ರಕಾಶ್ ಇತರರಿದ್ದರು.