ಗೋಕಾಕ: ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿ ಸಾಧಿಸುವ ಮೂಲಕ ಉತ್ತಮ ಲಿತಾಂಶ ನೀಡುತ್ತಿದ್ದು, ಕೊರತೆ ಇರುವಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದೇನೆ. ಅಲ್ಲದೆ ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನಗರದ ಎನ್‌ಎಸ್‌ಎ್ ಕಚೇರಿಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಬುಧವಾರ ವೈಯಕ್ತಿಕವಾಗಿ 25.15 ಲಕ್ಷ ರೂ. ವಿತರಿಸಿ ಮಾತನಾಡಿದರು. 1993ರಿಂದಲೂ ಶಿಕ್ಷಕರಿಗೆ ಗೌರವಧನ ನೀಡುವ ಶೈಕ್ಷಣಿಕ ಕಾಳಜಿಯ ಪರಿಪಾಠ ಮುಂದುವರಿಸಿಕೊಂಡು ಬಂದಿದ್ದೇನೆ. ಮೂಡಲಗಿ ವಲಯವು ಶೈಕ್ಷಣಿಕವಾಗಿ ಮುಂದೆ ಬರಬೇಕು. ಇಲ್ಲಿನ ವಿದ್ಯಾರ್ಥಿಗಳು ಉನ್ನತ ಸ್ಥಾನಮಾನ ಗಳಿಸಬೇಕು ಎಂಬ ಸದುದ್ದೇಶದಿಂದ ನಾನೇ ಆಸಕ್ತಿ ವಹಿಸಿ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ನೀಡುತ್ತಿದ್ದೇನೆ ಎಂದರು.
ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸೀತಾರಾಮು ಆರ್.ಎಸ್. ಮಾತನಾಡಿ, 8ನೇ ತರಗತಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದರೆ 10ನೇ ತರಗತಿಯಲ್ಲಿ ಉತ್ತಮ ಲಿತಾಂಶ ಪಡೆಯಬಹುದೆಂದು ಸಲಹೆ ನೀಡಿದರು.
ಮೂಡಲಗಿ ಬಿಇಒ ಅಜಿತ್ ಮನ್ನಿಕೇರಿ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳ ಸುಮಾರು 30 ಸಾವಿರ ವಿದ್ಯಾರ್ಥಿಗಳಿಗೆ 1.55 ಕೋಟಿ ರೂಪಾಯಿ ಮೊತ್ತದ ಶಾಲಾಬ್ಯಾಗ್, ಸಮವಸ ಮತ್ತು ಸ್ವೇಟರ್ ವಿತರಣೆ ಮಾಡಿದರು.
ತಹಸೀಲ್ದಾರಗಳಾದ ಡಾ. ಮೋಹನ ಭಸ್ಮೆ, ಶಿವಾನಂದ ಬಬಲಿ, ಬಿಇಒ ಜಿ.ಬಿ. ಬಳಗಾರ, ಮೂಡಲಗಿ ಶಿಶು ಅಭಿವದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಮಧ್ಯಾಹ್ನ ಉಪಾಹಾರ ಯೋಜನೆಯ ಸಹಾಯಕ ನಿರ್ದೇಶಕ ಎ.ಬಿ. ಮಲಬನ್ನವರ, ಸಮನ್ವಯಾಧಿಕಾರಿ ರೇಣುಕಾ ಆನಿ ಇತರರಿದ್ದರು.