ದೇವದುರ್ಗದ ಪಟೇಲ್ ಓಣಿಯಲ್ಲಿ ಪಿಎಂಶ್ರೀ ಯೋಜನೆಯಡಿ ಎಲ್‌ಕೆಜಿ ತರಬೇತಿ ಪ್ರಾರಂಭ ಹಿನ್ನೆಲೆಯಲ್ಲಿ ಪಾಲಕರ ಸಭೆ ನಡೆಯಿತು. ಸಿಆರ್‌ಪಿ ಬಾಬು ಹಡಗಲಿ, ಎಸ್‌ಡಿಎಂಸಿ ಅಧ್ಯಕ್ಷ ಸಾಬಣ್ಣ, ಎಲ್‌ಕೆಜಿ ವಿಭಾಗದ ಶಿಕ್ಷಕಿ ಮೀನಾಕ್ಷಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ತಾಯಮ್ಮ, ಮುಖ್ಯಶಿಕ್ಷಕಿ ಪವಿತ್ರಾ ಇತರರಿದ್ದರು. 
ಜಿಲ್ಲೆ

ಗುಣಮಟ್ಟದ ಶಿಕ್ಷಣಕ್ಕೆ ಪಾಲಕರ ಸಹಕಾರ ಅಗತ್ಯ

ರುದ್ರಪ್ಪ ವಾಲಿ

ದೇವದುರ್ಗ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಜತೆ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಮುಖ್ಯಶಿಕ್ಷಕಿ ಪವಿತ್ರಾ ಹೇಳಿದರು.

ಪಟ್ಟಣದ ಪಟೇಲ್ ಓಣಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೇಂದ್ರ ಪಿಎಂಶ್ರೀ ಯೋಜನೆಯಡಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ ಹಿನ್ನೆಲೆಯಲ್ಲಿ ಕರೆದಿದ್ದ ಪಾಲಕರ ಸಭೆಯಲ್ಲಿ ಸೋಮವಾರ ಮಾತನಾಡಿದರು.

ಪ್ರತಿ ಮಗುವನ್ನು ಕಲಿಕೆಯಲ್ಲಿ ತೊಡಗಿಸುವುದು ಮುಖ್ಯ. ಮಗುವಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಬಗ್ಗೆ ಪಾಲಕರು ನಿರಂತರ ಗಮನಹರಿಸಬೇಕು. ಮಗುವಿನ ಉಜ್ವಲ ಭವಿಷ್ಯಕ್ಕೆ ಪಾಲಕರ ಸಹಕಾರ ಮುಖ್ಯವಾಗಿದೆ. ಪಿಎಂಶ್ರೀ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಲ್‌ಕೆಜಿ ಶಾಲೆ ಪ್ರಾರಂಭಗೊಂಡಿದೆ.

ಪಾಲಕರು ಇಂಗ್ಲೀಷ್ ವ್ಯಾಮೋಹದಿಂದ ದುಬಾರಿ ಹಣ ನೀಡಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವ ಬದಲು ಸರ್ಕಾರಿ ಶಾಲೆಯಲ್ಲಿ ದಾಖಲಿಸಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.