ಜಿಲ್ಲೆ

4 ವರ್ಷ ಪ್ರಯತ್ನಿಸಿದರೂ ಪ್ರಶ್ನೆಪತ್ರಿಕೆ ಸೋರಿಕೆ ಕಿಂಗ್‌ಪಿನ್‌ಗೆ ಸಿಗಲಿಲ್ಲ ಜಾಮೀನು!

chandru

ಬೆಂಗಳೂರು: 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮೊದಲ ಆರೋಪಿ ಕುಮಾರಸ್ವಾಮಿಗೆ ಜಾಮೀನು ನೀಡಲು ಹೈಕೋರ್ಟ್ ಮತ್ತೊಮ್ಮೆ ನಿರಾಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಪೀಠ, ಅರ್ಜಿದಾರರ ವಿರುದ್ಧ ಗಂಭೀರ ಆರೋಪಗಳಿವೆ. ವಿಚಾರಣೆ ವಿಳಂಬವಾಗುತ್ತಿದೆ ಎಂಬ ಅಂಶ ಪರಿಗಣಿಸಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿತು.

ಈಗಾಗಲೇ ಜಾಮೀನು ಪಡೆದಿರುವ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗುತ್ತಿಲ್ಲ, ಮತ್ತೆ ಕೆಲವರು ತಲೆ ಮರೆಸಿಕೊಂಡಿದ್ದಾರೆೆ. ಹೀಗಿರುವಾಗ ಮೊದಲ ಆರೋಪಿಗೆ ಜಾಮೀನು ಮಂಜೂರು ಮಾಡಿದರೆ ಆತ ಸಹ ತಲೆ ಮರೆಸಿಕೊಳ್ಳುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ಅರ್ಜಿ ವಜಾಗೊಳಿಸಿದ ಪೀಠ, ಯಾವ ಕಾರಣಕ್ಕೆ ಹೈಕೋರ್ಟ್ ಆದೇಶ ಪಾಲನೆ ಆಗಿಲ್ಲ ಎಂಬುದಕ್ಕೆ ವಿವರಣೆ ಕೇಳಿ ವಿಚಾರಣಾ ನ್ಯಾಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿಗೊಳಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತು.