ಕೂಡ್ಲಿಗಿ ತಾಲೂಕು ಕಚೇರಿಗೆ ರಾಜ್ಯ ಕಂದಾಯ ಇಲಾಖೆ ಆಯುಕ್ತ ಪಿ.ಸುನೀಲ್ ಕುಮಾರ್ ಭೇಟಿ ನೀಡಿ ಹಳೆಯ ಕಡತಗಳ ಡಿಜಿಟಲೀಕರಣ ವ್ಯವಸ್ಥೆ ಪರಿಶೀಲಿಸಿದರು. ಸಹಾಯಕ ಆಯುಕ್ತ ವಿವೇಕಾನಂದ, ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಉಪ ತಹಸೀಲ್ದಾರ್ ಚಂದ್ರ ಮೋಹನ ಇತರರಿದ್ದರು. 
ಜಿಲ್ಲೆ

ತ್ವರಿತವಾಗಿ ಅರ್ಜಿ ವಿಲೇವಾರಿ ಮಾಡಿ

Kopala - Desk - Eraveni

ಕೂಡ್ಲಿಗಿ: ದಾಖಲೆಗಳ ಡಿಜಿಟಲೀಕರಣದಲ್ಲಿ ಕೂಡ್ಲಿಗಿ ತಾಲೂಕಿನ ಅಧಿಕಾರಿಗಳ ಕಾರ್ಯ ತೃಪ್ತಿಕರವಾಗಿದೆ ಎಂದು ಕಂದಾಯ ಇಲಾಖೆ ಆಯುಕ್ತ ಪಿ.ಸುನೀಲ್ ಕುಮಾರ್ ಮೆಚ್ಚುಗೆ ವ್ಯಕ್ತ ಪಡಿಸಿದರು.

ಪಟ್ಟಣದ ತಾಲೂಕು ಕಚೇರಿಗೆ ಗುರುವಾರ ಭೇಟಿ ನೀಡಿ, ಹಳೆಯ ಮತ್ತು ಹೊಸ ಕಡತಗಳನ್ನು ಡಿಜಿಟಲೀಕರಣ ಪ್ರಕ್ರಿಯೆ ಪರಿಶೀಲಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ಸಕಾಲದಲ್ಲಿ ಪರಿಶೀಲನೆ ನಡೆಸಿ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ಕೈಬರಹ ಪಹಣಿ, ಮ್ಯುಟೇಶನ್ ಹಾಗೂ ಹಕ್ಕುಪತ್ರಗಳ ಕಡತಗಳು ತುಂಬಾ ಹಳೆಯದಾಗಿ ನಶಿಸುವ ಹಂತ ತಲುಪಿದ್ದವು. ಇದರಿಂದಾಗಿ ಅಮೂಲ್ಯವಾದ ಕಡತಗಳನ್ನು ಸಂಗ್ರಹಿಸಲು ಡಿಜಿಟಲೀಕರಣ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ. ಸಾರ್ವಜನಿಕರು ಅಹವಾಲು ತಂದರೆ ಅವರಿಗೆ ಸೂಕ್ತ ಮಾಹಿತಿ ನೀಡುವುದರೊಂದಿಗೆ ನಿಗದಿತ ಸಮಯದಲ್ಲಿ ಕೆಲಸ ಮಾಡಿ ಕೊಡಬೇಕು. ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.

ಸಹಾಯಕ ಆಯುಕ್ತ ವಿವೇಕಾನಂದ, ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಉಪ ತಹಸೀಲ್ದಾರ್ ಚಂದ್ರಮೋಹನ್, ಅಭಿಲೇಖಾಲಯದ ಶಾಂತ ಕುಮಾರ್, ಚುನಾವಣಾ ಇಲಾಖೆಯ ಶಿವಕುಮಾರ್ ಇತರರಿದ್ದರು.