ಹರಪನಹಳ್ಳಿಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶಾಸಕಿ ಎಂ.ಪಿ.ಲತಾ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಮಂಜುನಾಥ, ಕುಬೇಂದ್ರನಾಯ್ಕ, ಬಿ.ಎಚ್.ಚಂದ್ರಪ್ಪ, ಸಿದ್ದಲಿಂಗನಗೌಡ, ಗುರುಪ್ರಸಾದ, ಪದ್ಮರಾಜ, ರಮೇಶ ಇತರರಿದ್ದರು. 
ಜಿಲ್ಲೆ

ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ

ಹರಪನಹಳ್ಳಿ: ಸರ್ಕಾರಿ ನೌಕರರ ಕಷ್ಟಗಳಿಗೆ ಸ್ಪಂದಿಸುವುದಾಗಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.

ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಸಂಗಪ್ಪನವರ ಮಾತನಾಡಿ, ಹರಪನಹಳ್ಳಿ ತಾಲೂಕಿನಲ್ಲಿ 900ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಈಗಿರುವ ನೌಕರರಿಗೆ ಕಾರ್ಯಭಾರ ಹೆಚ್ಚಾಗಿದೆ. ಎನ್‌ಪಿಎಸ್ ರದ್ದು ಮಾಡುವ ವಿಚಾರವನ್ನು ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಕೆ.ಪ್ರಕಾಶ್ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಬೇಕಾದವರಿಗೆ ಮತ ಹಾಕುವುದು ಸಾಮಾನ್ಯ, ಆದರೆ ಚುನಾವಣೆ ನಂತರ ಒಗ್ಗಟ್ಟಾಗಿ ಸಂಘದ ಅಭಿವೃದ್ಧಿಗೆ, ಮಕ್ಕಳ ಅಭಿವೃದ್ಧಿಗೆ ಚಿಂತಿಸಬೇಕು ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಜಿ.ಪದ್ಮಲತಾ, ನೌಕರರ ಸಂಘದ ಅಧ್ಯಕ್ಷ ಎಸ್.ರಾಮಪ್ಪ ಮಾತನಾಡಿದರು. ಪುರಸಭೆ ಸದಸ್ಯರಾದ ಗೊಂಗಡಿ ನಾಗರಾಜ, ಲಾಟಿ ದಾದಾಪೀರ್, ಉದ್ದಾರ ಗಣೇಶ, ಮಂಜುನಾಥ ಇಜಾಂತಕರ, ಪ್ರಮುಖರಾದ ಹುಲಿಕಟ್ಟಿ ಚಂದ್ರಪ್ಪ, ಮೈದೂರು ರಾಮಪ್ಪ, ಜಯಲಕ್ಷ್ಮೀ, ಬಿ.ರಾಜಶೇಖರ, ಚಂದ್ರಮೌಳಿ, ಪತ್ತಿನ ಸಂಘದ ಅಧ್ಯಕ್ಷ ಹನುಮಂತನಾಯ್ಕ ಇದ್ದರು.