ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಯಿತು. ಅಮೃತೇಶ್ ಚನ್ನಕೇಶವ, ಸಿ.ಪಿ.ಲಕ್ಷ್ಮಣ್, ಗುರುಮಲ್ಲಪ್ಪ, ಲಕ್ಷ್ಮಣ್ ಇದ್ದರು. 
ಜಿಲ್ಲೆ

ಗೃಹಲಕ್ಷ್ಮಿ ಸಮಸ್ಯೆಗೆ ಶೀಘ್ರ ಪರಿಹಾರ

ಜಿ.ಹೆಚ್. ಧನ್ಯಕುಮಾರ್

ಚಿಕ್ಕಮಗಳೂರು: ಅಧಿಕಾರಿಗಳು ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ಬಡಾವಣೆಯಲ್ಲಿ ಭಾನುವಾರ ನಗರಸಭೆಯಿಂದ ಆಯೋಜಿಸಿದ್ದ ಸಾರ್ವಜನಿಕರ ಕುಂದುಕೊರತೆ ಸಭೆ ಉದ್ಘಾಟಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ದಾಖಲೆ ಸಮಸ್ಯೆಯಿಂದ 80 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರುತ್ತಿಲ್ಲ. ಇದಕ್ಕೆ ಶೀಘ್ರ ಪರಿಹಾರ ಸಿಗಲಿದೆ. ಸ್ಥಳೀಯವಾಗಿ ಸಮಸ್ಯೆಗಳಿದ್ದರೆ ಕೂಡಲೇ ಪರಿಹರಿಸಬೇಕು ಎಂದು ತಿಳಿಸಿದರು.
ಕೊಳಚೆ ನಿರ್ಮೂಲನೆ ಮಂಡಳಿಯಿಂದ ಮಂಜೂರಾಗಿರುವ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಂಟಾಗಿದ್ದ ತಾಂತ್ರಿಕ ಮತ್ತು ಹಣದ ಕೊರತೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿಗಳು ರಾಜ್ಯಮಟ್ಟದಲ್ಲಿ , ಉಸ್ತುವಾರಿ ಸಚಿವರು ಜಿಲ್ಲಾಮಟ್ಟದಲ್ಲಿ ಹಾಗೂ ಶಾಸಕರು ನಗರ, ಹೋಬಳಿ, ಗ್ರಾಮಾಂತರ ಪ್ರದೇಶದಲ್ಲಿ ಜನ ಸಂಪರ್ಕ ಸಭೆ ಮಾಡಲಾಗುತ್ತಿದೆ. ಜನರ ಬಳಿಗೆ ಸರ್ಕಾರ ಎನ್ನುವುದು ಇದರ ಪ್ರಮುಖ ಉದ್ದೇಶ ಎಂದರು.