ಜಿಲ್ಲೆ

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಅಧಿಕಾರ ಸ್ವೀಕಾರ

ಆದರ್ಶ್. ಎಂ.ಕೆ.

ಮಡಿಕೇರಿ: ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಕೆಎಎಸ್ ಹಿರಿಯ ಶ್ರೇಣಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.


ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದು, ಬೆಂಗಳೂರಿನಲ್ಲಿ ವಿಶೇಷ ಜಿಲ್ಲಾಧಿಕಾರಿಯಗಿ ಕಾರ್ಯನಿರ್ವಹಿಸಿದ್ದಾರೆ.