ಚಿಕ್ಕಮಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪೊತನವಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಕುರಿತು ಮಾತನಾಡಿದ ಆರ್.ಅಶೋಕ್ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಸೇರಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದಾರೆ. ಇತ್ತೀಚಿಗೆ ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯನವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ಮುಖ್ಯಮಂತ್ರಿಗಳಾದವರು ಮಾಜಿ ಸಿಎಂಗಳನ್ನು ಭೇಟಿ ಮಾಡುವುದು ವಾಡಿಕೆ. ಆದರೆ, ಡಿಸಿಎಂ ಡಿಕೆ. ಶಿವಕುಮಾರ್ ಎಸ್.ಎಂ.ಕೃಷ್ಣ, ಎಚ್.ಡಿ.ದೇವೇಗೌಡ, ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡುವ ಮೂಲಕ ತಾವೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ಧಾರೆ. ಈ ಇಬ್ಬರು ನಾಯಕರ ಜಗಳ ಬೀದಿಗೆ ಬಂದರೆ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಹೇಳಿದ್ಧಾರೆ.
ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಸದಯಕ್ಕೆ ಆ ಸ್ಥಾನ ಖಾಲಿ ಇಲ್ಲ. ಸೋಮಣ್ಣ ಅವರ ಹೇಳಿಕೆ ಬಗ್ಗೆ ನನನಗೆ ತಿಳಿದಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿ ಕಟೀಲ್ ಅವರೇ ಮುಂದುವರೆಯಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇವೆ.
ವಿಧಾನಸಭೆ ಅಧಿವೇಶನ ಆರಂಭ್ಕಕೂ ಮುನ್ನ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಲಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್ ತಿಳಿಸಿದ್ಧಾರೆ.