ಜಿಲ್ಲೆ

ಜೆಡಿಎಸ್‌ನ ವಿವೇಕಾನಂದ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಆರ್.ಅಶೋಕ್ ಭಾಗಿಯಾಗಲಿದ್ದಾರೆ

ಅವಿನಾಶ್ ಜೈನಹಳ್ಳಿ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ವಿವೇಕಾನಂದ ಮೇ 16 ರಂದು ನಾಮಪತ್ರ ಸಲ್ಲಿಸುತ್ತಿದ್ದು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಹಲವು ಮುಖಂಡರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ತಿಳಿಸಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ವಿವೇಕಾನಂದ ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಗೋವಿಂದರಾವ್ ಮೆಮೊರಿ ಹಾಲ್‌ನಲ್ಲಿ ಸಭೆ ಆಯೋಜಿಸಲಾಗಿದ್ದು, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.