ಜಿಲ್ಲೆ

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಪ್ರಯೋಜನ ಪಡೆಯುವುದು ಹೇಗೆ?

ಬಡವರು ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ‘‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ’’ ಸಮರ್ಪಕ ಜಾರಿಯಲ್ಲಿ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ, ಯೋಜನೆ ಬಳಕೆಯಲ್ಲಿರುವ ಗೊಂದಲಗಳಿಂದಾಗಿ ಜನರಿಗೆ ತುರ್ತು ಪರಿಸ್ಥಿತಿ ಸೇರಿದಂತೆ ನಾನಾ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ದೊರೆಯದೆ ರೋಗಿಗಳ ಪರದಾಟ ಮುಂದುವರೆದಿದೆ. ಯೋಜನೆಯಡಿ ಸೇವೆ ನೀಡುವ ಸಂಬಂಧ ಖಾಸಗಿ ಆಸ್ಪತ್ರೆಗಳ ಮನವೊಲಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ. ಪರಿಣಾಮ ರೋಗಿಗಳಿಗೆ ಯೋಜನೆ ಲಾಭ ಪಡೆಯಲು ತೊಂದರೆಯಾಗುತ್ತಿದೆ. ಹಾಗಾದರೆ ಜನರು ಈ ಯೋಜನೆಯ ಲಾಭ ಪಡೆಯುವುದು ಹೇಗೆ? ಈ ಮೇಲಿನ ವಿಡಿಯೋ ನೋಡಿ.