vijayendra 
ಜಿಲ್ಲೆ

ಬಿ.ವೈ. ವಿಜಯೇಂದ್ರಗೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ ಹೈಕಮಾಂಡ್​

ಬೆಂಗಳೂರು: ವಿಧಾನ ಪರಿಷತ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್​ ತಣ್ಣಿರೆರಚಿದೆ.

ವಿಧಾನ ಪರಿಷತ್​ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು ಶಿಫಾರಸು ಮಾಡಲಾಗಿತ್ತು. ಸಂಸದೀಯ ಮಂಡಳಿಯಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಸಮಾಲೋಚನೆ ಮಾಡಲಾಗಿತ್ತು. ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಿತ್ತು. ಈ ವೇಳೆ ವಿಜಯೇಂದ್ರಗೆ ಟಿಕೆಟ್ ಕೊಡುವುದಕ್ಕೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು.

ಮುಂದಿನ ವಿಧಾನಸಭೆ ಚುನಾವಣೆ ಹಾಗೂ ಬಿಎಸ್​ವೈ ಪ್ರಚಾರ ಗಮನದಲ್ಲಿ ಇಟ್ಟುಕೊಂಡು ವಿಜಯೇಂದ್ರಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ಮಟ್ಟದಲ್ಲಿ ವಾದ ಮಾಡಲಾಗಿತ್ತು. ಆದರೆ ವಿಜಯೇಂದ್ರಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಿದಂತಾಗಲಿದೆ. ಇದನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ ಎಂದು ಕೆಲವರಿಂದ ಅಭಿಪ್ರಾಯ ವ್ಯಕ್ತವಾಗಿದೆ. ಬೇಕಾದರೆ ಮುಂದಿನ ವಿಧಾನಸಭೆಗೆ ಟಿಕೆಟ್ ಕೊಡೋಣ ಪಕ್ಷಕ್ಕೆ ಲಾಭವಾಗಲಿದೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಜಯೇಂದ್ರಗೆ ಟಿಕೆಟ್​ ಕೈತಪ್ಪಿದೆ.