ಜಿಲ್ಲೆ

ಚುನಾವಣಾ ಪೂರ್ವ ಕಾರ್ಯತಂತ್ರ ಅನುಷ್ಠಾನದತ್ತ‌ ಬಿಜೆಪಿ ಚಿತ್ತ: ಪಕ್ಷದ ರಾಜ್ಯ ಕಚೇರಿಯಲ್ಲಿ ಪ್ರಮುಖರ ಸಭೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಿಷನ್ 150 ಗುರಿ ಸಾಧಿಸಲೆಂದು‌ ಆಡಳಿತಾರೂಢ ಬಿಜೆಪಿ ಕಾರ್ಯತಂತ್ರ ಹೆಣೆದಿದ್ದು, ಹಂತ ಹಂತವಾಗಿ ಅನುಷ್ಠಾನದತ್ತ‌ ಚಿತ್ತ‌‌ ನೆಟ್ಟಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಪ್ರಮುಖರ ಸಭೆ ಭಾನುವಾರ (ಸೆ.04) ನಡೆಯಿತು. ಪ್ರಧಾನಿ ನರೇಂದ್ರ ಮೋದಿಯವರ ಸಲಹೆ, ಮುಂದಿನ ಚಟುವಟಿಕೆಗಳ ಬಗ್ಗೆ ಕೂಲಂಕಷವಾಗಿ ಸಭೆಯಲ್ಲಿ ಚರ್ಚೆಯಾಯಿತು.

ಚುನಾವಣಾ ತಂತ್ರಗಾರಿಕೆ ಭಾಗವಾಗಿರುವ ಜನೋತ್ಸವ, ತಲಾ 50 ವಿಧಾನಸಭೆ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ರಾಜ್ಯ‌ ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಸಮಾವೇಶಗಳು, ರಾಜ್ಯ‌ ನಾಯಕರ‌ ಎರಡು ತಂಡಗಳ ರಾಜ್ಯ ಪ್ರವಾಸದ ರೂಪರೇಷೆಗಳ ಬಗ್ಗೆ ಈ ಸಭೆಯಲ್ಲಿ ವಿಸ್ತಾರವಾದ ಪರಾಮರ್ಶಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ ಶೆಟ್ಟರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ.ವಿ.ರಾಜೇಶ್, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭಾಗವಹಿಸಿದ್ದರು.