ಬೆಂಗಳೂರು: ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಲೇಔಟ್, ವಸತಿ ಸಮುಚ್ಛಯಗಳನ್ನು ನಿರ್ಮಿಸಿದ ಕಾರಣ, ಮಳೆ ನೀರು ಸರಾಗವಾಗಿ ಹರಿಯದೇ ಬಳಹಷ್ಟು ತೊಂದರೆಗಳಾಗಿವೆ. ಹಾಗಾಗಿ ಈ ಕೃತ್ಯ ಯಾರೇ ಎಸಗಿದ್ದರೂ ಅವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಐಟಿಬಿಟಿ ಕಂಪೆನಿಗಳು, ಜನಸಾಮಾನ್ಯರು ಮಳೆನೀರಿನಲ್ಲಿ ಸಿಲುಕಿ ಪರದಾಡುವಂತಾಯಿತು. ಐಟಿಬಿಟಿ ವಲಯದವರೂ ಒತ್ತುವರಿ ಮಾಡಿಕೊಂಡಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.