ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಹವಾನಿಯಂತ್ರಿತ ಯಂತ್ರ(ಎಸಿ) ಸ್ಫೋಟಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಸಂಜೆ 7 ಗಂಟೆ ಸುಮಾರಿಗೆ ಸಮ್ಮೇಳನ ಸಭಾಂಗಣದಲ್ಲಿರುವ ಹವಾನಿಯಂತ್ರಿತ ಯಂತ್ರ ಸ್ಫೋಟಗೊಂಡು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಜೋರು ಶಬ್ಧ ಕಂಡು ಒಳಗೆ ಬಂದ ಸಿಬ್ಬಂದಿ ಅಗ್ನಿನಂದಕ ಬಳಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.