ಜಿಲ್ಲೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೂ, ಸಹಕಾರ ನೀಡಿದ ಸಂಬಂಧಿಗೂ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್​

ಚಾಮರಾಜನಗರ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 6.25 ಲಕ್ಷ ರೂಪಾಯಿ ದಂಡ ವಿಧಿಸಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಹೊರಡಿಸಿದೆ.

ಚಾಮರಾಜನಗರ ಮೇಗಲ ಉಪ್ಪಾರ ಬೀದಿಯ ಚಂದ್ರು ಅಲಿಯಾಸ್ ಚಂದ್ರಶೇಖರ್ ಶಿಕ್ಷೆಗೆ ಗುರಿಯಾದ ಯುವಕ. ಶಾಲೆಗೆ ತೆರಳುತ್ತಿದ್ದಾಗ ಅಪ್ರಾಪ್ತ ಬಾಕಿಯನ್ನು ಬಲವಂತವಾಗಿ ಕರೆದೊಯ್ದು ಸಂಬಂಧಿಕರ ಮನೆಯಲ್ಲಿರಿಸಿದ್ದ ಆರೋಪಿ.

ಸಂಬಂಧಿಕರ ಮನೆಯಲ್ಲಿದ್ದಾಗ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿಯ ದೂರಿನ ಮೇರೆಗೆ ಚಾಮರಾಜನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಚಂದ್ರಶೇಖರ್​ಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿರಿಸಿಕೊಂಡು ಸಹಕರಿಸಿದ್ದ ಸಂಬಂಧಿಗು ಶಿಕ್ಷೆ ನೀಡಲಾಗಿದೆ. ಸಂಬಂಧಿ ಕೋಡಿಮೋಳೆ ಗ್ರಾಮದ ಮಹಾದೇವಮ್ಮನಿಗೆ 5 ವರ್ಷ ಜೈಲು ಶಿಕ್ಷೆ 2 ಲಕ್ಷ ರೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ ಆದೇಶ ಹೊರಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)