ಬೆಂಗಳೂರು: ಕಾಂಗ್ರೆಸ್ ಪಕ್ಷವು ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ,ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಮೂಲಕ ಯೋಜನೆ ಹಾಕಿಕೊಂಡಿದೆ.
ಈ ಯಾತ್ರೆಯನ್ನು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕರೆ ನೀಡಿದೆ.
ದೇಶದಲ್ಲಿ 20 ರಿಂದ 24 ವರ್ಷದ 42% ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ ಎಂದು ಹೇಳಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಹೆಜ್ಜೆಗಳನ್ನು ಜೋಡಿಸಿ, ದೇಶವನ್ನು ಒಂದಾಗಿಸಿ ಎಂದು ಆಹ್ವಾನ ನೀಡಿದ್ದಾರೆ.