ಚಾಮರಾಜನಗರ: ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಗಿದ್ದ ಆರ್.ಧ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದ್ದಾರೆ.
ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹಲವಾರು ಸಚಿವರು ಭಾಗವಹಿಸಲಿದ್ದಾರೆ. ಮೊದಲಿಗೆ ಧ್ರುವನಾರಾಯಣ್ ಅವರ ಸಮಾಧಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ ಸಲ್ಲಿಸಿಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮಕ್ಕೆ ಈಗಾಗಲೇ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಗಮನಸೆಳೆದ ಕಿರುಚಿತ್ರ:
ಮಾಜಿ ಸಂಸದ ಆರ್.ಧ್ರುವನಾರಾಯಣ್ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಹುಟ್ಟು, ಸಾಧನೆ, ರಾಜಕೀಯ ಕುರಿತು ಬಿತ್ತರಿಸಿದ ಕಿರುಚಿತ್ರ ಕಾರ್ಯಕ್ರಮದಲ್ಲಿ ಗಮನ ಸೆಳೆಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದನದಲ್ಲಿ ಧ್ರುವ ಅವರಿಗೆ ಸಂತಾಪ ಸೂಚಿಸುವ ಸಂದರ್ಭದಲ್ಲಿ ಮಾತನಾಡಿದ್ದ ವಿಡಿಯೋ ತುಣುಕು ಅಭಿಮಾನಿಗಳನ್ನು ಭಾವುಕರನ್ನಾಗಿಸಿತು.