ಜಿಲ್ಲೆ

ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಡಾ. ವಿಜಯ ಸಂಕೇಶ್ವರ ಸೇರಿ ಐವರು ಗೌರವ ಉಪಾಧ್ಯಕ್ಷರ ನೇಮಕ

ಹುಬ್ಬಳ್ಳಿ: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಚೇರ್ಮನ್ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಸೇರಿ ಐವರು ಗೌರವ ಉಪಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ, ಹಿರಿಯ ಗಾಯಕ ಪಂಡಿತ ಎಂ. ವೆಂಕಟೇಶಕುಮಾರ, ಲೇಖಕರಾದ ಬಾನು ಮುಸ್ತಾಕ ಮತ್ತು ಡಾ. ಎಚ್.ಎಸ್. ಶಿವಪ್ರಕಾಶ ಅವರನ್ನು ನೇಮಕ ಮಾಡಲಾಗಿದೆ.

ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗೌರವ ಉಪಾಧ್ಯಕ್ಷರ ನೇಮಕವನ್ನು ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)