ಜಿಲ್ಲೆ

ಪಹಣಿ ಹೆಸರು ಬದಲಾಯಿಸಲು ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಕಲಬುರಗಿ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಯಡ್ರಾಮಿ ತಹಶಿಲ್ದಾರ ಕಚೇರಿಯಲ್ಲಿ 7000 ಸಾವಿರ ರೂಪಾಯಿ ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿ ಜಯಶ್ರೀ, ಎಸಿಬಿ ಬಲೆಗೆ ಬಿದ್ದಿದ್ದಾರೆ.

ಪಹಣಿ ಹೆಸರು ಬದಲಾವಣೆಗೆ ಗ್ರಾಮಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಗೆ ದೂರು ದಾಖಲಾಗಿತ್ತು. ಇಂದು ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡ್​ ಆಗಿ ಜಯಶ್ರೀ ಸಿಕ್ಕಿಬಿದ್ದಿದ್ದಾರೆ. (ದಿಗ್ವಿಜಯ ನ್ಯೂಸ್​)