ಜಿಲ್ಲೆ

ನಟ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನ ಪ್ರಕರಣ: ತಪ್ಪೊಪ್ಪಿಕೊಂಡ ಬಂಧಿತ ಆರೋಪಿ

ಮೈಸೂರು: ನಟ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನ ಪ್ರಕರಣ ಬಂಧನವಾಗಿರುವ ಆರೋಪಿ ಅರುಣಾ ಕುಮಾರಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ.

ಅರುಣಾ ಕುಮಾರಿಯ ಹೇಳಿಕೆಯನ್ನು ಪೊಲೀಸ್​ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ನಾನು ಬ್ಯಾಂಕ್ ಅಧಿಕಾರಿ ಅಂತ ಹೇಳಿಕೊಂಡು ಮಾತನಾಡಿದ್ದು ನಿಜ ಎಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ.

ಇಂದು ಆಕೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣ ಸಂಬಂಧ ಕೆಲ ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದು, ಮತ್ತಷ್ಟು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ.

ನಟ ದರ್ಶನ್ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದು ಯಾಕೆ? ಆ ದಾಖಲೆಗಳನ್ನು ದರ್ಶನ್ ಆಪ್ತ ಸ್ನೇಹಿತರಿಗೇ ತೋರಿಸಿ ಹಣಕ್ಕೆ ಡಿಮಾಂಡ್ ಮಾಡಿದ್ದು ಯಾಕೆ? ಹೀಗೆ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.