ಮೈಸೂರು: ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ (ಡಿ.23) ಮರಟಿಕ್ಯಾತನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಪ್ರದೀಪ್ (32) ಆತ್ಮಹತ್ಯೆ ಮಾಡಿಕೊಂಡಾತ. ಬೆಳವಾಡಿ ಶಿವಮೂರ್ತಿ ಅವರು ಜಿಲ್ಲಾ ಜೆಡಿಎಸ್ನ ಖಜಾಂಚಿ ಆಗಿದ್ದಾರೆ. ಪ್ರದೀಪ್ ತಾಯಿ ಭಾಗ್ಯ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ. ಇದೀಗ ತಮ್ಮ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಕ್ಕೆ ಬಹುದೊಡ್ಡ ಆಘಾತ ನೀಡಿದೆ.
ಪ್ರದೀಪ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್)