ಜಿಲ್ಲೆ

ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಮೈಸೂರಿನ ಕ್ವಾಟ್ರಸ್​ನಲ್ಲೇ ನೇಣಿಗೆ ಶರಣಾದ ಪೊಲೀಸ್​ ಪೇದೆ

ಮೈಸೂರು: ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್​ನಲ್ಲಿ ನಿನ್ನೆ (ಮೇ.27) ನಡೆದಿದೆ.

ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಪೇದೆ. ಉತ್ತರ ಕರ್ನಾಟಕ ಮೂಲದ ಪರಸಪ್ಪ, 2016ನೇ ಬ್ಯಾಚ್​ನಲ್ಲಿ ಪೊಲೀಸ್​ ಹುದ್ದೆಗೆ ಆಯ್ಕೆಯಾಗಿದ್ದ. ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿನ್ನೆ ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕ್ವಾಟ್ರಸ್​ನಲ್ಲೇ ನೇಣುಬಿಗಿದುಕೊಂಡು ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದುವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್​)