ಜಿಲ್ಲೆ

ಡೆತ್​ನೋಟ್​ ಬರೆದಿಟ್ಟು ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣು

ಹಾಸನ: ಡೆತ್​ನೋಟ್​ ಬರೆದಿಟ್ಟು ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿ.ಟಿ.ಗೋಪಾಲಕೃಷ್ಣ (41) ನೇಣಿಗೆ ಶರಣಾದ ಅಧಿಕಾರಿ.

ಗೋಪಾಲಕೃಷ್ಣ ಅವರು ಕಳೆದ ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿಯಾಗಿದ್ದರು. ನನಗೆ ಬದುಕಲು ಇಷ್ಟವಿಲ್ಲ, ಆದ್ದರಿಂದ ಸಾಯುತ್ತಿದ್ದೇನೆ ಎಂದು ಡೆತ್‌ನೋಟ್ ಬರೆದಿಟ್ಟು ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಪಾಲಕೃಷ್ಣ ಅವರು ಹಾಸನ ನಗರದ ಹೊರವಲಯದ ಚಿಕ್ಕಕೊಂಡಗೊಳ ನಿವಾಸಿ. ಮೊನ್ನೆಯಷ್ಟೇ ಅನಾರೋಗ್ಯ ಕಾರಣದಿಂದ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಗ್ರಾಮದ ಲೆಕ್ಕಿಗರೊಬ್ಬರು ನೇಣಿಗೆ ಶರಣಾಗಿದ್ದರು.

ಆತ್ಮಹತ್ಯೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್​)