ಜಿಲ್ಲೆ

ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ​ ಅಬ್ದುಲ್​ ನಜೀರ್​

ಮಂಗಳೂರು: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್​ ನಜೀರ್​ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್​ ನಜೀರ್​ ಅವರು ಸಲ್ಲಿಸಿದರು. ಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು.

ಅಂದಹಾಗೆ ಅಬ್ದುಲ್​ ನಜೀರ್​ ಅವರು ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದಾರೆ. ನಿನ್ನೆ (ಡಿ.26) ರಾತ್ರಿ 8 ಗಂಟೆ ಸುಮಾರಿಗೆ ಹೈದರಾಬಾದ್​ನಿಂದ ಮಂಗಳೂರಿಗೆ ಆಗಮಿಸಿ, ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಾಸ್ತವ್ಯ ಹೂಡಿದರು. ನಾಳೆ (ಡಿ.28) ಕುಕ್ಕೆಯಿಂದ ಪುತ್ತೂರಿಗೆ ಆಗಮಿಸಿ, ಬಾರ್​ ಅಸೋಸಿಯೇಷನ್​ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.

2022ರ ಜನವರಿ 1ರವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಅಬ್ದುಲ್​ ನಜೀರ್​ ಅವರು ಭಾಗವಹಿಸಲಿದ್ದಾರೆ.