ಜಿಲ್ಲೆ

ಸಿದ್ದರಾಮೋತ್ಸವದಲ್ಲಿ ಕೈ ಕಾರ್ಯಕರ್ತರಿಗೆ ಭರ್ಜರಿ ಭೋಜನ ವ್ಯವಸ್ಥೆ: ಹೀಗಿದೆ ನೋಡಿ ಊಟದ ಮೆನು

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೆಣ್ಣೆ ನಗರಿಯಲ್ಲಿಂದು ನಡೆಯುತ್ತಿರುವ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿದ್ದು ಅಭಿಮಾನಿಗಳು ಹಾಗು ಕಾಂಗ್ರೆಸ್​ ಕಾರ್ಯಕರ್ತರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಎರಡು ಕಡೆ ಊಟಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಬಿಸಿಬೇಳೆ ಬಾತ್​​, ಪಲಾವ್​, ಮೊಸರನ್ನ, ಮೈಸೂರು ಪಾಕ್ ಹಾಗೂ ‌ಲಾಡು ತಿನಿಸುಗಳು ಊಟದ ಮೆನುವಿನಲ್ಲಿದೆ. ಸುಮಾರು ಐದು ಲಕ್ಷ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರಿನಿಂದ ಬಂದ 2500 ಬಾಣಸಿಗರು ಊಟ ತಯಾರಿ ಮಾಡಿದ್ದಾರೆ.

20 ಕ್ವಿಂಟಲ್ ಲಾಡು ಹಾಗೂ 6 ಲಕ್ಷ ಮೈಸೂರು ಪಾಕ್ ಮಾಡಲಾಗಿದೆ. ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಜಿಲ್ಲೆಗಳಿಂದ ಬರುವ ಬೆಂಬಲಿಗರಿಗೆ ಇನ್ನೊಂದು ಕಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಆಹಾರ ಸಾಮಗ್ರಿಗಳನ್ನು ಟನ್ ಲೆಕ್ಕದಲ್ಲೇ ತರಲಾಗಿದೆ. (ದಿಗ್ವಿಜಯ ನ್ಯೂಸ್​)