ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಇಣಚಗಲ್ ಕ್ರಾಸ್ ಬಳಿಯ ಸೇತುವೆಯೊಂದರ ಕೆಳಗೆ ಅಪರಿಚಿತ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಬರ್ಬರವಾಗಿ ಹತ್ಯೆ ಮಾಡಿ ಬಿಸಾಕಿರುವ ಸ್ಥಿತಿಯಲ್ಲಿದೆ.
ಇಣಚಗಲ್ ಕ್ರಾಸ್ ಹತ್ತಿರವಿರುವ ಕಿರು ಸೇತುವೆಯ ಕೆಳಗಡೆ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಆನಂದ ವಾಘಮೋಡೆ, ಪಿಎಸೈ ವಿನೋದ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮುಖದ ಮೇಲೆ ರಕ್ತಸಿಕ್ತ ಗಾಯಗಳಾಗಿದ್ದು, ಪೊಲೀಸರ ತನಿಖೆಯ ಬಳಿಕ ಘಟನೆಯ ಸತ್ಯಾಂಶ ತಿಳಿಯಬೇಕಿದೆ. ಮುದ್ದೇಬಿಹಾಳ ಠಾಣೆ ವ್ಯಾಪ್ತಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)