ವಿಜಯಪುರ: ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಯ ಛಾವಣಿ ಹಾರಿ ಹೋದ ಪರಿಣಾಮ ಜೋಳಿಗೆಯಲ್ಲಿದ್ದ ಮಗು ಮೃತಪಟ್ಟಿರುವ ಮನಕಲಕುವ ಘಟನೆ ಸಿಂದಗಿ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಬ್ದುಲ್ ರೆಹೆಮಾನ್ ಎಂಬುವರ 8 ತಿಂಗಳ ಮಗು ಮೃತಪಟ್ಟಿದೆ. ಬಿರುಗಾಳಿಯ ರಭಸಕ್ಕೆ ಮನೆಯ ಛಾವಣಿ ಹಾರಿ ಹೋಗಿ ಕಂಬಕ್ಕೆ ಕಟ್ಟಿದ್ದ ಜೋಳಿಯಲ್ಲಿದ್ದ ಮಗು ಮೃತಪಟ್ಟಿದೆ.
ವಿದ್ಯುತ್ ಕಂಬಕ್ಕೆ ಸಿಲುಕಿ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ನಿನ್ನೆ (ಏಪ್ರಿಲ್ 27) ಸಾಯಂಕಾಲ ಸುರಿದ ಬಿರುಗಾಳಿ ಸಹಿತ ಧಾರಾಕರ ಮಳೆಗೆ ಈ ದುರ್ಘಟನೆ ಸಂಭವಿಸಿದ್ದು, ಮಗುವನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.