ಚಾಮರಾಜನಗರ: ವಿಜಯವಾಣಿ ದಿನಪತ್ರಿಕೆಯ ಪ್ರತಿನಿಧಿ ಉಮ್ಮತ್ತೂರು ನಾಗೇಶ್ (56) ಇಂದು (ಮೇ.3) ಸಂಜೆ ಕೊನೆಯುಸಿರೆಳೆದಿದ್ದಾರೆ.
ನಾಗೇಶ್ ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಾಗೇಶ್ ಅವರನ್ನು ಕಳೆದುಕೊಂಡ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಪ್ರತಿನಿಧಿ ನಾಗೇಶ್ ಅವರ ಸಾವಿಗೆ ವಿಜಯವಾಣಿ ಬಳಗ ಕಂಬನಿ ಮಿಡಿದಿದ್ದು, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದೆ.