ಕೊಪ್ಪಳ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ. ಬಿಜೆಪಿಯ ನಾಯಕರು ಹೈಕಮಾಂಡ್ ಸೂಚನೆಯಂತೆ ಪ್ರತಿಭಟನೆ ನಡೆಸಿ ರಾಜೀನಾಮೆ ಕೇಳುತ್ತಿದ್ದಾರೆ ಅಷ್ಟೇ ಎಂದು ಶಾಸಕ ರಾವೇಂದ್ರ ಹಿಟ್ನಾಳ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.
ಸಿಎಂ ಯಾವುದೇ ತಪ್ಪು ಮಾಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೂ ಗೊತ್ತಿದೆ. ವಿರೋಧ ಪಕ್ಷದವರ ಕೆಲಸವೇ ನಮ್ಮನ್ನು ವಿರೋಧಿಸುವುದು. ಬಿಜೆಪಿಗರು ಅವರ ಹೈಕಮಾಂಡ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ನಾನು ಹಲವು ಬಿಜೆಪಿ ಶಾಸಕರೊಂದಿಗೆ ವೈಯಕ್ತಿಕವಾಗಿ ಮಾತನಾಡಿರುವೆ. ಅವರೂ ಸಹ ಸಿದ್ದರಾಮಯ್ಯ ತಪ್ಪಿಲ್ಲ. ತಮ್ಮ ಹೈಕಮಾಂಡ್ ಒತ್ತಡಕ್ಕೆ ಮಣಿದು ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆಂದು ಸಮರ್ಥಿಸಿಕೊಂಡರು.
ರಾಜ್ಯಪಾಲರು ತನಿಖೆಗೆ ಸೂಚಿಸಿದ ನಡೆ ಹೈಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ತೀರ್ಪು ಗೌರವಿಸಬೇಕು. ದೇಶ ಕಂಡ ಅತ್ಯುತ್ತಮ ನಾಯಕರಲ್ಲಿ ಸಿದ್ದರಾಮಯ್ಯ ಒಬ್ಬರು. ಅವರ ಜನಪ್ರಿಯತೆ ಸಹಿಸದೆ ಕೇಂದ್ರ ಸರ್ಕಾರ ಗಧಾಪ್ರಹಾರ ನಡೆಸುತ್ತಿದೆ. ನಾವೂ ಕಾನೂನು ಮೂಲಕವೇ ಉತ್ತರ ಕೊಡುತ್ತೇವೆ. ತಪು$್ಪ ಮಾಡದಿದ್ದರೆ ಸದ್ಯ ರಾಜೀನಾಮೆ ನೀಡಲಿ ಎಂದು ಅನೇಕರು ಹೇಳುತ್ತಿದ್ದಾರೆ. ತಪ್ಪೇ ಮಾಡಿಲ್ಲ ಎಂದ ಮೇಲೆ ರಾಜೀನಾಮೆ ಯಾಕೆ ನೀಡಬೇಕು ? ರಾಜೀನಾಮೆ ಸಲ್ಲಿಸುವ ಪ್ರಶ್ನೆಯೇ ಇಲ್ಲವೆಂದರು.