ಜಿಲ್ಲೆ

ಕುಶಾಲನಗರದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹುಟ್ಟು ಹಬ್ಬವನ್ನು ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಪಿ.ಎಂ.ಶ್ರೀ. ಶಾಲೆಯ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಸಿಹಿ ವಿತರಿಸುವ ಮೂಲಕ ಆಚರಿಸಲಾಯಿತು.

ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಸೈದ್ದಾಂತಿಕ ಬದ್ಧತೆ, ಜನಪರ ಕಾಳಜಿ, ಸತ್ಯನಿಷ್ಠುರತೆ, ದೇಶದ ಭವಿಷ್ಯದ ಬಗೆಗಿನ ಸ್ಪಷ್ಟ ಮುನ್ನೋಟ, ಅಪಾರ ಧೈರ್ಯ ಮತ್ತು ಪ್ರೀತಿಯನ್ನು ತುಂಬಿಕೊAಡ ನಮ್ಮ ನೆಚ್ಚಿನ ಜನನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ನೋಟ್ ಪುಸ್ತಕ ನೀಡಲಾಗುತ್ತಿದ್ದು. ಸತ್ಯಕ್ಕಾಗಿ ಹೋರಾಡುವ ರಾಹುಲ್ ಗಾಂಧಿಯವರು ದೀರ್ಘ, ಆರೋಗ್ಯಕರ ಮತ್ತು ಸಂತೋಷದ ಜೀವನವನ್ನು ನಡೆಸಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ ಮಾತನಾಡಿ, ರಾಹುಲ್ ಗಾಂಧಿ ಸದಾ ಸತ್ಯವನ್ನು ಮಾತನಾಡಿ ಸುಳ್ಳಿನ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದಾರೆ. ದೇಶದಲ್ಲಿ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಸದಾ ತಮ್ಮ ಕಾಳಜಿ ವ್ಯಕ್ತಪಡಿಸುವುದರೊಂದಿಗೆ ದೇಶದಲ್ಲಿ ಶಾಂತಿ ಸೌಹಾರ್ದತೆಯ ಸಂದೇಶವನ್ನು ಸಾರಿಕೊಂಡು ಬಂದಿರುತ್ತಾರೆ. ಮುಂದಿನ ದಿನಗಳಲ್ಲಿ ಅವರು ದೇಶದ ಚುಕ್ಕಾಣಿಯನ್ನು ಹಿಡಿಯಲಿ ಎಂಬ ಹಾರೈಕೆ ಪ್ರತಿಯೊಬ್ಬ ನಾಗರಿಕನೂ ಕೂಡ ಬಯಸುತ್ತಿದ್ದಾರೆ ಎಂದರು.

ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷ ಶಿವಶಂಕರ್, ಪ್ರಕಾಶ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಂ, ಶಾಲಾ ಮುಖ್ಯ ಶಿಕ್ಷಕಿ ಭಾರತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದನ್, ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಚಿನ್, ನಯಾಜ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರೇಮ್ ಕುಮಾರ್, ರೋಷನ್, ಇರ್ಫಾನ್ ಮತ್ತಿತರರು ಇದ್ದರು.