ರಾಯಚೂರು: ನಗರದ ವಾಲ್ಕಾಟ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್ ಪ್ರಚಾರ ಸಭೆ ಏರ್ಪಡಿಸಲಾಗಿದ್ದು, ರಾಹುಲ್ ಗಾಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಆಗಮಿಸಲಿದ್ದಾರೆ ಎಂದು ಸಣ್ಣ ಕೈಗಾರಿಕೆ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
ಸ್ಥಳೀಯ ವಾಲ್ಕಾಟ್ ಮೈದಾನದಲ್ಲಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿರುವ ವೇದಿಕೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ರಾಹುಲ್‌ಗಾಂ ಶಿವಮೊಗ್ಗದಲ್ಲಿ ಪ್ರಚಾರ ಸಭೆ ಮುಗಿಸಿಕೊಂಡು ರಾಯಚೂರಿಗೆ ಆಗಮಿಸಿದ್ದು, ರಾಜ್ಯದ ಹಲವು ಸಚಿವರು, ಪಕ್ಷದ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಜನರಿಗೆ ಬಿಸಿಲಿನ ಸಮಸ್ಯೆಯಾಗದಂತೆ ಬೃಹತ್ ಪೆಂಡಾಲ್ ಹಾಕಲಾಗಿದ್ದು, 20 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 30 ಸಾವಿರಕ್ಕೂ ಅಕ ಜನರು ಸಭೆಗೆ ಆಗಮಿಸುವ ನಿರೀಕ್ಷೆಯಿದೆ. ಕ್ಷೇತ್ರದ ಎಂಟು ವಿಧಾನಸಭೆ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದಾರೆ.
ಹಿಂದಿನ ಚುನಾವಣೆಗೆ ಹೋಲಿಸಿದಲ್ಲಿ ಈ ಚುನಾವಣೆಯಲ್ಲಿ ಕಾರ್ಯಕರ್ತರಲ್ಲಿ ಹೆಚ್ಚಿನ ಉತ್ಸಾಹ ಕಂಡು ಬರುತ್ತಿದೆ. ಮುಂದಿನ ಐದು ದಿನಗಳ ಕಾಲ ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯ ನಡೆಸಲಾಗುವುದು. ಪಕ್ಷದ ಅಭ್ಯರ್ಥಿಯ ಗೆಲುವು ನಿಶ್ಚಿತವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದ ಹೊರಗಿನವರು, ಸ್ಥಳೀಯರು ಎಂಬ ಅಂಶಗಳು ಲೆಕ್ಕಕ್ಕೆ ಬರುವುದಿಲ್ಲ. ವಿ.ಸೋಮಣ್ಣ, ಎಚ್.ಡಿ.ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರಗಳನ್ನು ಬಿಟ್ಟು ಬೇರೆ ಕ್ಷೇತ್ರಗಳಲ್ಲಿ ಸ್ಪರ‌್ಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಷಯ ಮುಖ್ಯವಾಗುತ್ತದೆ.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ ಬಗ್ಗೆ ಆರೋಪ ಮಾಡಿರುವುದು ಸರಿಯಲ್ಲ. ಕುಮಾರಸ್ವಾಮಿ ಹಿಟ್ ಆಂಡ್ ರನ್ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುವುದರಲ್ಲಿ ನಿಸ್ಸೀಮರು ಎಂದು ಎನ್.ಎಸ್.ಬೋಸರಾಜು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಮುಖಂಡರಾದ ಪಾರಸಮಲ್ ಸುಖಾಣಿ, ಜಿ.ಬಸವರಾಜರೆಡ್ಡಿ, ಕೆ.ಶಾಂತಪ್ಪ, ರಾಜಶೇಖರ ರಾಮಸ್ವಾಮಿ, ಅಮರೇಗೌಡ ಹಂಚಿನಾಳ, ಜಿ.ಶಿವಮೂರ್ತಿ, ರುದ್ರಪ್ಪ ಅಂಗಡಿ ಉಪಸ್ಥಿತರಿದ್ದರು.