ಜಿಲ್ಲೆ

ರಾಹುಲ್‌ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ

ಮರಿದೇವ ಹೂಗಾರ

ಹುಬ್ಬಳ್ಳಿ: ವಿದೇಶಿ ನೆಲದಲ್ಲಿ ಭಾರತದ ಪ್ರತಿಷ್ಠೆ ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಈ ವೇಳೆ ಭಾರತದ ಮಾನವನ್ನು ಎತ್ತಿ ಹಿಡಿಯಬೇಕು. ಅದು ಬಿಟ್ಟು ದಲಿತರು, ಹಿಂದುಳಿದವರ ಮೀಸಲಾತಿ ತೆಗೆಯುವುದಾಗಿ ಹೇಳುತ್ತಿದ್ದಾರೆ. ಇದು ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೀಸಲಾತಿ ಇರಬೇಕು. ಸರ್ವರಿಗೂ ಸಮಪಾಲು ಸಿಗಬೇಕು ಎಂಬ ಧ್ಯೇಯ ಸಂವಿಧಾನ ಹೊಂದಿದೆ. ಇದನ್ನು ಮೀರಿ ರಾಹುಲ್ ಗಾಂಧಿ ಮಾತನಾಡಿರುವುದು ಮೀಸಲಾತಿ ಬಗೆಗಿನ ನಿಷ್ಕಾಳಜಿ ತೋರುತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಮುಖರಾದ ಪ್ರಭು ನವಲಗುಂದಮಠ, ಶಿವು ಮೆಣಸಿನಕಾಯಿ, ವೆಂಕಟೇಶ ಕಾಟವೆ, ಪರಶುರಾಮ ಪೂಜಾರಿ, ಮಹೇಂದ್ರ ಕೌತಾಳ ಇತರರು ಇದ್ದರು.