ಜಿಲ್ಲೆ

ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ; ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ, ಕುಟುಂಬಸ್ಥರಿಗೆ ಸಾಂತ್ವಾನ

theerthaswamy

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆ ನಂತರ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಅಗಲಿದ ಪುನೀತ್ ಕುಟುಂಬಕ್ಕೆ ಹಾಗೂ ಪತ್ನಿ ಅಶ್ವಿನಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ.