ಬೆಳಗಾವಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ನಮ್ಮ ಶಾಲೆ&ನಮ್ಮ ಜವಾಬ್ದಾರಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಣ ಇಲಾಖೆಯ ಮೇಲುಸ್ತರುವಾರಿ ಅಧಿಕಾರಿಗಳ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್​ ಶಿಂಧೆ ಮಾತನಾಡಿದರು. ಲೀಲಾವತಿ ಹಿರೇಮಠ, ಗಂಗಾಧರ ದಿವಟರ, ಸೀತಾರಾಮು ಆರ್​.ಎಸ್​. ಇತರರಿದ್ದರು. 
ಜಿಲ್ಲೆ

ಶಾಲಾ ಪ್ರಾರಂಭೋತ್ಸವದಂದೆ ಪಠ್ಯ ಪುಸ್ತಕ ನೀಡಿ: ರಾಹುಲ್​ ಶಿಂಧೆ ಸೂಚನೆ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ಸರ್ಕಾರದಿಂದ ಸರಬರಾಜು ಮಾಡಲಾಗಿರುವ ಶಾಲಾ ಸಮವಸ, ಪಠ್ಯಪುಸ್ತಕ ಮೇ 29ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವದ ದಿನ ವಿತರಣೆ ಮಾಡಬೇಕು. ಪ್ರತಿ ನಾಲ್ಕನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆ ನಡೆಸಿ ಅವರ ಸಹಕಾರದಿಂದ ಮಕ್ಕಳ ದಾಖಲಾತಿ, ಹಾಜರಾತಿಯನ್ನು ಕಲಿಕೆಗೆ ಸಮನ್ವಯ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್​ ಶಿಂಧೆ ನಿರ್ದೇಶನ ನೀಡಿದರು.

ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ನಮ್ಮ ಶಾಲೆ&ನಮ್ಮ ಜವಾಬ್ದಾರಿ ಶಾಲಾ ಪ್ರಾರಂಭೋತ್ಸವ ಹಾಗೂ 2025&26ನೇ ಸಾಲಿನ ಶೈಣಿಕ ಗುಣಮಟ್ಟದ ಪ್ರಗತಿಗಾಗಿ ಶಿಣ ಇಲಾಖೆಯ ಮೇಲುಸ್ತುವಾರಿ ಅಧಿಕಾರಿಗಳ ಒಂದು ದಿನದ ಕಾರ್ಯಾಗಾರದ ಅಧ್ಯತೆ ವಹಿಸಿ ಅವರು ಮಾತನಾಡಿದರು.

ಗುಣಾತ್ಮಕ ಶಿಣಕ್ಕಾಗಿ 1ರಿಂದ 10ನೇ ತರಗತಿಯವರೆಗೆ ರ್ನಿದಿಷ್ಟ ಮತ್ತು ವಿಶಿಷ್ಟ ಯೋಜನೆ ರೂಪಿಸಬೇಕು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಆರಂಭದಿಂದಲೇ ವಿಶೇಷ ಚಟುವಟಿಕೆ ರೂಪಿಸಿ 5 ಹಾಗೂ 8ನೇ ತರಗತಿ ಮಕ್ಕಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿನ ಗ್ರಂಥಾಲಯಗಳ ಬಳಕೆ ಮೂಲಕ ಶಿಣದ ಗುಣಮಟ್ಟ ತಿಳಿಯಲು ಯೋಜಿತ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಎಲ್ಲ ಶೈಣಿಕ ಮೇಲುಸ್ತುವಾರಿ ಅಧಿಕಾರಿಗಳಿಗೆ ನಲಿಕಲಿ, 4 ರಿಂದ 7 ರವರೆಗಿನ ವಿದ್ಯಾರ್ಥಿಗಳಿಗೆ ಹಾಗೂ 8,9,10 ನೇ ತರಗತಿಯ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಣಕ್ಕೆ ಸಂಬಂಧಿಸಿದಂತೆ ಕ್ರಿಯಾಯೋಜನೆ ಪರಿಚಯಿಸಲಾಯಿತು. ಅಲ್ಲದೇ ಮುಂಬರುವ ದಿನಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನ, ದಾಖಲಾತಿ, ಹಾಜರಾತಿ, ಮೂಲ ಸೌಕರ್ಯಗಳ ಒದಗಿಸುವಿಕೆ, ಇನ್​ಸ್ಪೆರ್​, ಅವಾರ್ಡ್​, ಕಂಪ್ಯೂಟರ್​ ಶಿಣದ ಪರಿಚಯಾತ್ಮಕ ವಿವರಣೆ ನೀಡಲಾಯಿತು. ಕ್ರೀಡಾ ಸಾಮಗ್ರಿಗಳ ಸದ್ಬಳಕೆಯ ಕ್ರಿಯಾಯೋಜನೆ ಕೂಡ ಒದಗಿಸಲಾಯಿತು.

ಡಿಡಿಪಿಐ ಲೀಲಾವತಿ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ ಮತ್ತಿತರರು ಇದ್ದರು. ಚಿಕ್ಕೋಡಿ ಉಪ ನಿರ್ದೇಶಕ ಸೀತಾರಾಮು ಆರ್​.ಎಸ್​. ವಂದಿಸಿದರು.

ಅಧಿಕಾರಿಗಳ ಶಾಲಾ ಭೇಟಿ ಕಡ್ಡಾಯ ನಾನು ಸಹ ಶಾಲೆಗಳಿಗೆ ತೆರಳಿ ಪಾಠ ಮಾಡುತ್ತೇನೆ. ಅದೇ ರೀತಿ ಎಲ್ಲ ಅಧಿಕಾರಿಗಳೂ ಶಾಲಾ ಭೇಟಿ ಕಡ್ಡಾಯವಾಗಿ ಮಾಡಬೇಕು. ಎಲ್ಲ ಅಧಿಕಾರಿಗಳು ದತ್ತು ಶಾಲೆಗೆ ತೆರಳಿ ಪಾಠ ಮಾಡಬೇಕು. ಉಪ ನಿರ್ದೇಶಕರು, ೇತ್ರ ಶಿಣಾಧಿಕಾರಿಗಳು, ತಾಪಂ ಇಒಗಳು, ವಿಷಯ ಪರಿವೀಕರು, ಸಿಆರ್​ಪಿ, ಬಿಆರ್​ಪಿ, ಡಯಟ್​ ಉಪನ್ಯಾಸಕರೂ ಸೇರಿ ಎಲ್ಲ ಅಧಿಕಾರಿಗಳು ಶಾಲಾ ಭೇಟಿಗಳ ಮೂಲಕ ಶಿಣದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಬೇಕು ಎಂದರು. ಇಲಾಖೆಯ ಸೂಚನೆಗಳು ಮತ್ತು ಅವಶ್ಯಕತೆ ಅರಿತುಕೊಂಡು ಪ್ರತಿ ಮಗುವಿಗರ ಮಧ್ಯಾಹ್ನ ಉಪಹಾರ ಯೋಜನೆ ಅನುಷ್ಠಾನಗೊಳಿಸಬೇಕು ಜಿಪಂ ಸಿಇಒ ರಾಹುಲ್​ ಶಿಂಧೆ ತಿಳಿಸಿದರು.