ಜಿಲ್ಲೆ

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಿ

ರಾಯಚೂರು: ರೈತರು ಬೆಳೆದ ಬೆಳೆಗೆ ಕನಿಷ್ಟ ಬೆಂಬಲ ಬೆಲೆಯೊಂದಿಗೆ ಪ್ರೋತ್ಸಾಹ ಧನ ನೀಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳಿಂದ ದೆಹಲಿ ಹೋರಾಟ ಮಾದರಿಯಲ್ಲಿ ಡಿ.16ರಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಕೆ.ವೈ.ಬಸವರಾಜ ನಾಯಕ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ನಿಗಧಿಪಡಿಸಲಾದ ಕನಿಷ್ಟ ಬೆಂಬಲ ಬೆಲೆ ಅವೈಜ್ಞಾನಿಕವಾಗಿದ್ದು, ಡಾ.ಸ್ವಾಮಿನಾಥನ್ ಸಮಿತಿ ವರದಿಯ ಶಿಫಾರಸ್ಸಿನ ಮೇರೆಗೆ ಕನಿಷ್ಟ ಬೆಂಬಲ ಬೆಲೆ ನಿಗಧಿಗೊಳಿಸಿ ಕಾಯ್ದೆ ರೂಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಅನಿತಾ, ಹೊಳೆಯಪ್ಪ, ಹುಲಿಗೆಪ್ಪ ತಿಮ್ಮಾಪೂರು, ಚನ್ನಪ್ಪ, ಶ್ರೀಧರ ಸೇರಿದಂತೆ ಇತರರಿದ್ದರು.