filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 43; 
ಜಿಲ್ಲೆ

ಏಮ್ಸ್‌ಗಾಗಿ 200 ಎಕರೆ ಜಾಗ ಗುರುತು: ಡಿಸಿ ಕೆ.ನಿತೀಶ್

Gangavati - Shashidhara Shashidhara

ರಾಯಚೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಜಿಲ್ಲಾಡಳಿತದಿಂದ ಕೇಂದ್ರ ಸರ್ಕಾರಕ್ಕೆ ವಿಸ್ತೃತ ಪ್ರಸ್ತಾವನೆ ಸಲ್ಲಿಸಬೇಕಾಗಿರುವುದರಿಂದ ಪ್ರಸ್ತಾವನೆಯಲ್ಲಿ ಏಮ್ಸ್‌ಗಾಗಿ ಜಿಲ್ಲೆಯಲ್ಲಿ ಲಭ್ಯವಿರುವ ಸ್ಥಳವನ್ನು ಗುರುತಿಸಿ ಮಾಹಿತಿಯನ್ನು ಕಳುಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ನಿತೀಶ್ ಹೇಳಿದರು.

ಅವರು ನಗರದ ಡಿಸಿ ಕಚೇರಿಯಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂದು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಸ್ತುವಾರಿ ಸಚಿವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಜಿಲ್ಲಾಡಳಿತದಿಂದ ಕೇಂದ್ರ ಸರ್ಕಾರಕ್ಕೆ ಏಮ್ಸ್‌ಗಾಗಿ ಮಂತ್ರಾಲಯ ರಸ್ತೆಯ ರಾಯಚೂರು ವಿವಿ ಎದುರಿಗೆ 200 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ ರಾಯಚೂರು ನಗರಕ್ಕೆ ಹತ್ತಿರವಿರುವ ಹಾಗೂ ಒಂದೇ ಕಡೆ 200 ಎಕರೆ ಭೂಮಿ ಲಭ್ಯವಿರುವ ಕಾರಣಕ್ಕೆ ಈ ಸ್ಥಳವನ್ನು ಗುರುತಿಸಲಾಗಿದೆ ಎಂದರು.

ಭೂಮಿ ಮಾತ್ರವಲ್ಲದೇ ಏಮ್ಸ್‌ಗಾಗಿ ನಿರಂತರವಾಗಿ ವಿದ್ಯುತ್, ನೀರು ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಜಿಲ್ಲೆಯ ಇನ್ನಿತರ ಕಡೆಗಳಲ್ಲಿ ಸ್ಥಳಗಳನ್ನು ವೀಕ್ಷಿಸಲಾಗಿದೆ. ಆದರೆ ನಗರಕ್ಕೆ ಸಮೀಪವಾದ ಜಾಗ ರಾಯಚೂರು ವಿವಿ ಹತ್ತಿರವಿದ್ದು, ಶಾಸಕರು, ಸಚಿವರು ಹಾಗೂ ರಾಜ್ಯ ಸರ್ಕಾರದ ಜತೆಗೆ ಚರ್ಚಿಸಿ ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ವಿಸ್ತೃತ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಈಗ ಗುರುತಿಸಿರುವ ಜಾಗವು ಅರಣ್ಯ ಇಲಾಖೆಯದ್ದಾಗಿದ್ದು, ಸಾರ್ವಜನಿಕ ಉದ್ದೇಶಕ್ಕಾಗಿ ಸ್ಥಳವನ್ನು ಬಳಸಿಕೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಲ್ಲಿ ಅರಣ್ಯ ಭೂಮಿಯನ್ನು ಏಮ್ಸ್‌ಗಾಗಿ ಭೂ ದಾಖಲೆಗಳನ್ನು ಬದಲಿ ಮಾಡಲು ಕಾನೂನಿನಲ್ಲಿ ಅವಕಾಶವಿದ್ದು, ಅರಣ್ಯಯ ಇಲಾಖೆಗೆ ಬೇರೆ ಸ್ಥಳವನ್ನು ನೀಡಲಾಗುತ್ತದೆ ಎಂದು ಹೇಳಿದರು.