ಜಿಲ್ಲೆ

ರಾಯಚೂರು ವಿಮಾನ ನಿಲ್ದಾಣಕ್ಕೆ ಕ್ರಿಯಾ ಯೋಜನೆ ಸಲ್ಲಿಸಲು ಡಿಸಿಎಂ ಲಕ್ಷ್ಮಣ ಸವದಿ ಸೂಚನೆ

ರಾಯಚೂರು: ರಾಯಚೂರಿನಲ್ಲಿ ವಿಮಾನ ನಿಲ್ದಾಣ ಆರಂಭಕ್ಕೆ ಸಂಬಂಧಿಸಿದಂತೆ ಕ್ರಿಯಾಯೋಜನೆ ರೂಪಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರದ ಹೊರವಲಯದಲ್ಲಿರುವ ಏರ್‌ಸ್ಟ್ರಿಪ್‌ನಲ್ಲಿಯೇ ವಿಮಾನ ನಿಲ್ದಾಣ ಮಾಡಲಾಗುವುದು. ವಿಮಾನ ನಿಲ್ದಾಣದಿಂದ ಐಐಐಟಿಯ ತಜ್ಞರು, ವಿದ್ಯಾರ್ಥಿಗಳ ಪಾಲಕರಿಗೆ ಅನುಕೂಲವಾಗಲಿದೆ. ಅದಕ್ಕಾಗಿ ಕೆಕೆಆರ್‌ಡಿಬಿಯಿಂದ 50 ಕೋಟಿ ರೂ. ನೀಡಲಾಗುವುದು. ನಗರದ ಅಭಿವೃದ್ಧಿಗೆ 100 ಕೋಟಿ ರೂ. ಮಂಜೂರು ಮಾಡಲಾಗಿದೆ. ಜಿಲ್ಲೆಗೆ ಏಮ್ಸ್ ತರಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ತುಂಗಭದ್ರಾ ಎಡದಂಡೆ ಅಚ್ಚುಕಟ್ಟು ವ್ಯಾಪ್ತಿ ಅಕ್ರಮ ನೀರಾವರಿ ತಡೆಗೆ ಸಂಬಂಧಿಸಿದಂತೆ ನೀರಾವರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಪ್ರಸ್ತುತ ಇರುವ ಬೆಳೆ ಕಟಾವು ನಂತರ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.