ರಾಯಚೂರು: ಅಂತಾರಾಜ್ಯ ಬಸ್ ಸಂಚಾರ ಬುಧವಾರದಿಂದ ಆರಂಭಗೊಂಡಿದ್ದು, ಮೊದಲ ಹಂತರದಲ್ಲಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಬಸ್ ಸಂಚಾರ ಶುರುವಾಗಿದೆ. ಕರೊನಾ ಸೋಂಕು ಹರಡದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಬಸ್ ಸಂಚಾರ ಆರಂಭಿಸಲಾಗಿದೆ. ಪ್ರಸ್ತುತ ಮಂತ್ರಾಲಯಕ್ಕೆ 5 ಹಾಗೂ ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ಎರಡು ಬಸ್‌ಗಳ ಸಂಚಾರ ಆರಂಭಗೊಂಡಿದೆ.
ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಿಂದ ಮಂತ್ರಾಲಯಕ್ಕೆ ತೆರಳಿದ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು. ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಇನ್ನೂ ರಾಯರ ದರ್ಶನಕ್ಕೆ ಅವಕಾಶ ನೀಡದಿರುವುದರಿಂದ ಮಂತ್ರಾಲಯಕ್ಕೆ ತೆರಳುವವರ ಸಂಖ್ಯೆ ಕಡಿಮೆಯಿದೆ.