oplus_2 
ಜಿಲ್ಲೆ

ಕೇಜ್ರಿವಾಲ್ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಲು ಆಮ್ ಆದ್ಮಿ ಪಕ್ಷ ಒತ್ತಾಯ

Gangavati - Shashidhara Shashidhara

ರಾಯಚೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಮೇಲೆ ನಡೆದಿರುವ ಹಲ್ಲೆ ಖಂಡನೀಯವಾದದ್ದು ಕೂಡಲೇ ಹಲ್ಲೆ ಮಾಡಿದವರನ್ನು ಬಂಧಿಸಿ ಶಿಕ್ಷೆ ವಿಧಿಸಬೇಕೆಂದು ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಡಿಸಿ ಕಚೇರಿ ಆವರಣದಲ್ಲಿ ಎಡಿಸಿ ಶಿವಾನಂದ ಭಜಂತ್ರಿಗೆ ಸೊಮವಾರ ಮನವಿ ಸಲ್ಲಿಸಲಾಯಿತು.

ದೆಹಲಿಯ ವಿಕಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡುವ ವೇಳೆ ಬಿಜೆಪಿ ಯುವ ಮೋರ್ಚಾದ ಕೆಲವರು ಕೇಜ್ರಿವಾಲ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕೃತ್ಯವನ್ನು ನಾಗರಿಕ ಸಮಾಜ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಯ ನಾಯಕರು ಸೋಲಿನ ಹತಾಶೆಯಿಂದ ಈ ರೀತಿಯ ದಾಳಿ ನಡೆಸಿದ್ದಾರೆ.

ಘಟನೆಯ ಕುರಿತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ದೇಶದ ಜನರ ಎದುರು ಕ್ಷಮೆಯಾಚಿಸಬೇಕು ಜತೆಗೆ ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ವೀರೇಶ ಕುಮಾರ, ಜಿಲ್ಲಾ ಕಾರ್ಯದರ್ಶಿ ನುಸರತ್ ಅಲಿ, ಪ್ರಮುಖರಾದ ಬಸವರಾಜ ಗುತ್ತೆದಾರ, ಮಹಿಬೂಬ್, ಈರೇಶ ಕುಮಾರ ಸೇರಿದಂತೆ ಇತರರಿದ್ದರು.