ಜಿಲ್ಲೆ

ರೋಗಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಡಿಸಿ ನಿತೀಶ

ರಾಯಚೂರು: ತಾಲೂಕಿನ ಗಾರಲದಿನ್ನಿ ಗ್ರಾಮದ ಬಾಣಂತಿ ಈಶ್ವರಿ ಎಂಬುವವರು ರಕ್ತಸ್ರಾವದಿಂದ ಶುಕ್ರವಾರ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ. ಬಾಣಂತಿಯ ಹೆರಿಗೆಯಾದ ಮಟಮಾರಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ ಕೆ.ನಿತೀಶ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯನ್ನು ಮೇಲ್ದಾರ್ಜೆಗೆ ಏರಿಸಲಾಗಿದ್ದು, ಮುಂದಿನ ದಿನಗಳಲ್ಲಿ ವೈದ್ಯರನ್ನು ಹಾಗೂ ಸಿಬ್ಬಂದಿಯನ್ನು ನೇಮಿಸಿ ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಜನರಿಗೆ ಉತ್ತಮ ಸೇವೆಯನ್ನು ನೀಡಬೇಕು. ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು ಹಾಗೂ ರೋಗಿಗಳ ಆರೈಕೆ ಹಾಗೂ ಚಿಕಿತ್ಸೆಯ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನಿಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ತುಕಾರಂ ಪಾಂಡ್ವೆ, ಡಿಎಚ್‌ಒ ಡಾ.ಸುರೇಂದ್ರಬಾಬು, ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ, ತಾಲೂಕು ಪಂಚಾಯತಿ ಇಒ ಚಂದ್ರಶೇಖರ ಪವಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್, ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತೀಶ ಸೇರಿದಂತೆ ಇತರರು ಇದ್ದರು.