ಆದಿರಾಜ್ ಆದೋನಿ 
ಜಿಲ್ಲೆ

ಆ.11ರಂದು ಭಗೀರಥ ಜಯಂತಿ ಆಚರಣೆ: ಆದಿರಾಜ್

ರಾಯಚೂರು: ಜಿಲ್ಲಾ ಭಗೀರಥ ಉಪ್ಪಾರ ಸಮಾಜ ಸಂಘದಿಂದ ಮಹರ್ಷಿ ಭಗೀರಥ ಜಯಂತಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತರಾದ ಸಮಾಜದ ಹಿರಿಯ ನೌಕರರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆದಿರಾಜ್ ಆದೋನಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಆ.11ರಂದು ನಗರದ ರಂಗಮಂದಿರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಸಾನಿಧ್ಯವನ್ನು ಹೊಸದುರ್ಗದ ಮೈದುರೈ ಭಗೀರಥ ಪೀಠದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಹಾಗೂ ಮಲದಕಲ್‌ನ ನಿಜಾನಂದ ಯೋಗಾಶ್ರಮದ ಪೀಠಾಧ್ಯಕ್ಷ ಬಸವರಾಜ್‌ರಾಜಗುರು ಅವರು ವಹಿಸಿಕೊಳ್ಳಲಿದ್ದಾರೆ ಎಂದರು.

ಸಚಿವ ಎನ್‌ಎಸ್ ಬೋಸರಾಜು ಉದ್ಘಾಟನೆಯನ್ನು ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಸಂಸದ ಜಿ.ಕುಮಾರ ನಾಯಕ, ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಮಾಜಿ ಸಂಸದ ಬಿ.ವಿ ನಾಯಕ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಅಂದು ಬೆಳಿಗ್ಗೆ 7 ಗಂಟೆಗೆ ಉಪ್ಪಾರವಾಡಿಯ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಿಂದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದವರೆಗೆ ಮಹರ್ಷಿ ಭಗೀರಥ ಔಆಚಿತ್ರ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಸಮಾಜ ಸೇವಕ ಎಸ್‌ಎಲ್ ವೀರೇಶ್ ಅವರ ಸೇವೆಯನ್ನು ಗುರುತಿಸಿ ಭಗೀರಥ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ನ್.ಬುಗ್ಗಾರೆಡ್ಡಿ, ಕಾರ್ಯಾಧ್ಯಕ್ಷ , ಮಾಣಿಕಪ್ಪ, ಅಮರೇಶ್, ಪಾಂಡುರಂಗ, ಬಸವರಾಜ್ ಸೇರಿದಂತೆ ಇತರರಿದ್ದರು.