ರಾಯಚೂರು: ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೈದ್ರಾಬಾದ್ ರಸ್ತೆಯಲ್ಲಿ ಗುರುವಾರ ಬೆಳಗಿನ ಜಾವ 5 ಗಂಟೆಗೆ ಸಂಭವಿಸಿದೆ.
ಇದನ್ನೂ ಓದಿ: ಬಸ್ಗಳ ನಡುವೆ ಡಿಕ್ಕಿಯಾಗಿ ಚಾಲಕ ಸಾವು
ಕಲ್ಮಲಾ ಗ್ರಾಮದ ಎಂ.ಡಿ ಖಾಸಿಂ(31) ಮೃತ. ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿ ಕಲ್ಮಲಾ ಗ್ರಾಮಕ್ಕೆ ಹೋಗುವಾಗ ಈ ಘಟನೆ ನಡೆದಿದೆ.
ಕಲ್ಮಲಾ ಗ್ರಾಮದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಖಾಸಿಂ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿ ಒನ್ ವೇ ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಪಿಕ್‌ಅಪ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.