ರಾಯಚೂರು: ವಾಮಮಾರ್ಗದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ವಿಪಕ್ಷ ನಾಯಕರ ಮನೆ ಮೇಲೆ ಸಿಬಿಐ ದಾಳಿ ಮಾಡಿಸುವ ಮೂಲಕ ವಾಮಮಾರ್ಗ ಬಳಸಿ ಉಪಚುನಾವಣೆ ಗೆಲ್ಲಲು ಯತ್ನಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.
ಸಿಬಿಐ ದಾಳಿಗೆ ಡಿ.ಕೆ.ಶಿವಕುಮಾರ ಸೇರಿ ಕಾಂಗ್ರೆಸ್‌ನ ನಾಯಕರ‌್ಯಾರೂ ಹೆದರಿಲ್ಲ. ಆರ್.ಆರ್.ನಗರ ಮತ್ತು ಶಿರಾದಲ್ಲಿ ಬಿಜೆಪಿ ಅಧಿಕಾರ, ಹಣದ ಬಲ ಮಾಡಿದರೂ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಬುಧವರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯ ಮಸ್ಕಿ ಕ್ಷೇತ್ರದಲ್ಲಿಯೂ ಶೀಘ್ರ ಉಪ ಚುನಾವಣೆ ನಡೆಯಲಿದೆ. ಐದಾರು ಜನ ಟಿಕೆಟ್ ಆಕಾಂಕ್ಷಿಗಳಿದ್ದು, ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಪಕ್ಷ ಗೆಲುವು ಸಾಧಿಸಲಿದೆ ಎಂದರು.