ವೆಂಕಟೇಶ 
ಜಿಲ್ಲೆ

ಶಾಲೆಗಳಲ್ಲಿ ಮೂಸೌಕರ್ಯ ಒದಗಿಸಲು ಕ್ರಮ: ವೆಂಕಟೇಶ

Gangavati - Shashidhara Shashidhara

ರಾಯಚೂರು: ಜಿಲ್ಲೆಯಲ್ಲಿ ಮಕ್ಕಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಿ ಕಾರ್ಯ ನಿರ್ವಹಿಸುವುದು ಅತ್ಯಗತ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗದಂತೆ ಆಗಾಗ ಮೇಲ್ವಿಚಾರಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಮೇಲೆ ದೌರ್ಜನ್ಯಗಳು ಕಂಡು ಬಂದಾಗ ಮಕ್ಕಳಿಗೆ ರಕ್ಷಣೆ ಒದಗಿಸುವಲ್ಲಿ ಅಧಿಕಾರಿಗಳೊಂದಿಗೆ ಜನರ ಸಹಕಾರವು ಅಗತ್ಯವಾಗಿರುತ್ತದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಆರ್‌ಟಿಇ ಕಾಯ್ದೆಯಡಿ ದಾಖಲಾದ ಮಕ್ಕಳ ಬಗ್ಗೆ ಮಾಹತಿ ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹಾಗೂ ಬಾಲ್ಯವಿವಾಹ ತಡೆಗೆ ಕಾರ್ಯತಂತ್ರ ರೂಪಿಸಲಾಗಿದ್ದು, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ತಡೆಯುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಮಾಜದ ಸುಸ್ಥಿರ ಬೆಳವಣಿಗೆಗೆ ಸರ್ಕಾರದ ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ , ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಾಂಸ್ಥಿಕ ರಕ್ಷಣಾಧಿಕಾರಿ ಹನುಮೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಮೇಶ ಸೇರಿದಂತೆ ಇತರರಿದ್ದರು.