filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.62314814, 0.5921875);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 38; 
ಜಿಲ್ಲೆ

ಶೌಚಗೃಹಗಳ ನೋಂದಣಿಗೆ ಒತ್ತು ನೀಡಿ: ಸಿಇಒ ರಾಹುಲ್ ತುಕಾರಾಂ

ರಾಯಚೂರು: ಜನರಲ್ಲಿ ಶೌಚಾಲಯಗಳ ಬಳಕೆಗೆ ಹೆಚ್ಚಿನ ಜಾಗೃತಿ ಮೂಡಿಸಲು ಅಧಿಕಾರಿಗಳು, ಇಲಾಖೆಯ ಸಿಬ್ಬಂದಿ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಕಚೇರಿಯ ಜಲನಿರ್ಮಲ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನಮ್ಮ ಶೌಚಾಲಯ ನಮ್ಮ ಗೌರವ ಕಾರ್ಯಕ್ರಮದಲ್ಲಿ ಜಾಗೃತಿ ಪೋಸ್ಟರ್ ಬಿಡುಗಡೆಗೊಳಿಸಿ ಮಂಗಳವಾರ ಮಾತನಾಡಿದರು.

ಗ್ರಾಮೀಣ ಭಾಗಗಳಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಜನರಲ್ಲಿ ಅರಿವು ಮೂಡಿಸಬೇಕು. ಶೌಚಾಲಯ ಇಲ್ಲದಿರುವ ಆಸ್ಪತ್ರೆ, ಅಂಗನವಾಡಿ ಹಾಗೂ ಶಾಲೆಗಳನ್ನು ಪಟ್ಟಿ ಮಾಡಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಜತೆಗೆ ಅಭಿಯಾನದ ಅವಧಿಯಲ್ಲಿ ವೈಯಕ್ತಿಕ ಶೌಚಾಲಯಗಳ ನೊಂದಣಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶೌಚಾಲಯ ಆಂದೋಲನಕ್ಕೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಡಿಎಸ್ ಶಶಿಕಾಂತ ಶಿವಪುರೆ, ಪಿಡಿ ಶರಣಬಸವ ಕೆಸರಟ್ಟಿ, ಡಿಎಚ್‌ಒ ಡಾ.ಸುರೇಂದ್ರ ಬಾಬು, ಡಿಡಿಪಿಐ ಕೆ.ಡಿ.ಬಡಿಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಡಿಡಿ ನವೀನಕುಮಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ವಿನೋದ ಗುಪ್ತಾ ಸೇರಿದಂತೆ ಇತರರಿದ್ದರು.