ರಾಯಚೂರು: ನಗರ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ಒಗಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ನಮ್ಮ ಕ್ಲಿನಿಕ್ ಆರಂಭಿಸಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
ನಗರದ ಚಂದ್ರಬಂಡಾ ರಸ್ತೆಯ ಆಶ್ರಯ ಕಾಲೋನಿಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ನಮ್ಮ ಕ್ಲಿನಿಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಆರೋಗ್ಯ ಇಲಾಖೆ ಕೇಂದ್ರವನ್ನು ಸುಸ್ಥಿತಿಯಲ್ಲಿ ಇರಿಸಿಕೊಂಡು ಬಡವರಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಆರೋಗ್ಯವೇ ಭಾಗ್ಯವಾಗಿದ್ದು, ಎಲ್ಲರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕಿದೆ ಎಂದರು.