ರಾಯಚೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ಪಿಯು ದ್ವಿತೀಯ ಇಂಗ್ಲಿಷ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು. 
ಜಿಲ್ಲೆ

ರಾಯಚೂರು ಜಿಲ್ಲೆಯಲ್ಲಿ ಪಿಯು ಇಂಗ್ಲಿಷ್ ಪರೀಕ್ಷೆ ಸುಗಮ, 1,347 ವಿದ್ಯಾರ್ಥಿಗಳ ಗೈರು ದೈಹಿಕ ಅಂತರ ಮಾಯ

ರಾಯಚೂರು: ಜಿಲ್ಲಾದ್ಯಂತ 36 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಜರುಗಿದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಸುಗಮವಾಗಿ ನಡೆದಿದ್ದು, ಬಹುತೇಕ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭಕ್ಕೆ ಮುಂಚೆ ದೈಹಿಕ ಅಂತರ ನಿಯಮ ಪಾಲನೆ ಆಗಲಿಲ್ಲ.

ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದ 19,228 ವಿದ್ಯಾರ್ಥಿಗಳಲ್ಲಿ 17,881 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1,347 ವಿದ್ಯಾರ್ಥಿಗಳು ಗೈರಾಗಿದ್ದರು. ಕರೊನಾ ಹಿನ್ನೆಲೆಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದ 1,303 ಅಂತರ್ ಜಿಲ್ಲೆ ಹಾಗೂ 14 ಅಂತರ್ ರಾಜ್ಯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅಂತರ್ ರಾಜ್ಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು.

ಪರೀಕ್ಷೆ ಆರಂಭಕ್ಕೆ ಮುಂಚೆ ಆಶಾ ಕಾರ್ಯಕರ್ತೆಯರು ಥರ್ಮಲ್ ಸ್ಕಾೃನರ್ ಮೂಲಕ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಕೇಂದ್ರದ ಒಳಗೆ ಬಿಟ್ಟರು. ಮಾಸ್ಕ್ ಇಲ್ಲದ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯುವಂತೆ ಸೂಚನೆ ನೀಡಲಾಯಿತು.