ಜಿಲ್ಲೆ

ರಾಯಚೂರು ಜಿಲ್ಲಾದ್ಯಂತ ಫ್ಲೆಕ್ಸ್, ಬ್ಯಾನರ್‌ಗಳ ತೆರವು ಕಾರ್ಯಾಚರಣೆ

Gangavati - Desk - Veeresh S Ullagaddi

ರಾಯಚೂರು: ಚುನಾವಣೆ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿ ಮಾಡುತ್ತಿದ್ದಂತೆ ಜಿಲ್ಲೆಯಲ್ಲಿ ವಿವಿಧೆಡೆ ಅಳವಡಿಸಲಾಗಿದ್ದ ಸರ್ಕಾರಿ ಮತ್ತು ರಾಜಕೀಯ ಪಕ್ಷಗಳ ಜಾಹೀರಾತಿನ ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಯಿತು.

ಬುಧವಾರ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರಿ ಯೋಜನೆಗಳ ಮಾಹಿತಿ ಫಲಕಗಳು, ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರ ಭಾವಚಿತ್ರಗಳಿರುವ ಫ್ಲೆಕ್ಸ್‌ಗಳನ್ನು ತೆಗೆಯಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಮತ್ತು ಯೋಜನೆಗಳ ಮಾಹಿತಿ ನೀಡುವ 10ಕ್ಕೂ ಹೆಚ್ಚು ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.